ಅಕ್ಟೋಬರ್ 22, ಅಮೇಜಾನ್ ಪ್ರೈಂ ಮೂಲಕ ತೆರೆಗೆ ಬರಲಿರುವ ರತ್ನನ್ ಪ್ರಪಂಚ
ಕೇವಲ ಟ್ರೇಲರ್ ಮೂಲಕವೇ ಕನ್ನಡ ಚಿತ್ರಪ್ರೇಮಿಗಳಲ್ಲಿ ತೀವ್ರ ಸಂಚಲನವನ್ನು ಸೃಷ್ಟಿಸಿದ್ದ ರತ್ನನ್ ಪ್ರಪಂಚ ಚಿತ್ರದ ಬಿಡುಗಡೆ ದಿನಾಂಕವನ್ನು ಪ್ರಕಟಿಸಿದ್ದು ಅಕ್ಟೋಬರ್ 22, ರoದ ಓಟಿಟಿ ತಾಣವಾದ ಅಮೇಜಾನ್ ಪ್ರೈಂ ನಲ್ಲಿ ತೆರೆ ಕಾಣಲಿದೆ.
ಟ್ರಾವೆಲ್ ಕಾಮಿಡಿಯ ಈ ಚಿತ್ರವನ್ನು ರೋಹಿತ್ ಪದಕಿ ನಿರ್ದೇಶಿಸಿದ್ದು ಡಾಲಿ ಧನಂಜಯ್ ಮತ್ತು ರೇಬಾ ಮೋನಿಕಾ ಜಾನ್ ಅವರು ರತ್ನಾಕರ್ ಹಾಗೂ ಮಯೂರಿ ಪಾತ್ರದಲ್ಲಿ ನಟಿಸಿದ್ದಾರೆ.
ಸಂದೀಪ ಜೋಶಿ
ಸಂದೀಪ್ ಜೋಶಿ - ಇವರು ಕೊಪ್ಪಳ ಜಿಲ್ಲೆಯ ಗಂಗಾವತಿ ನಿವಾಸಿಯಾಗಿದ್ದು ಪ್ರಸ್ತುತ ಸ್ವ ಉದ್ಯೋಗದಲ್ಲಿ ತೊಡಗಿಕೊಂಡಿದ್ದಾರೆ. ಬಿ.ಎ.ಮತ್ತು ಡಿಪ್ಲೊಮಾ ಇನ್ ಹಾರ್ಟಿಕಲ್ಚರ್, ಸಿ.ಟಿ.ಟಿ.ಸಿ ತರಬೇತಿ, ರೇಕಿ ಚಿಕಿತ್ಸೆ ತರಬೇತಿಯನ್ನು ಪಡೆದಿದ್ದು 13 ವರ್ಷಗಳ ಕಾಲ ರಾಯಚೂರು, ಧಾರವಾಡ ಕೃಷಿ ವಿಶ್ವವಿದ್ಯಾಲಯ ಮತ್ತು ಬಾಗಲಕೋಟೆಯ ತೋಟಗಾರಿಕೆ ವಿಶ್ವವಿದ್ಯಾನಿಲಯದಲ್ಲಿ ಕ್ಷೇತ್ರ ಸಹಾಯಕ, ಗಣಕಯಂತ್ರ ನಿರ್ವಾಹಕ ಕೆಲಸವನ್ನು ನಿರ್ವಹಿಸಿದ್ದಾರೆ.
ಇವರು ಲೇಖಕರಷ್ಟೇ ಅಲ್ಲ.ನಟರು ಕೂಡ. ವೃತ್ತಿಯ ಜೊತೆಗೆ ರೇಕಿ ಚಿಕಿತ್ಸೆ ಮತ್ತು ಸಮಾಜ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.
ಚಿತ್ರರಂಗದ ಕೆಲವು ವಿಶಿಷ್ಟ ವಿಷಯಗಳ ಬಗ್ಗೆ ತಾನೇ ಅಲ್ಲಿ ಇಲ್ಲಿ ಸಂಶೋಧಿಸಿ, ಕೇಳಿ, ಓದಿ ತಿಳಿದ ವಿಷಯಗಳನ್ನೆಲ್ಲಾ ಒಂದೆಡೆ ಕೂಡಿಟ್ಟು, ಚಿತ್ರೋದ್ಯಮದ ಓದುಗರೊಂದಿಗೆ ಹಂಚಿಕೊಳ್ಳಲಿದ್ದಾರೆ.
ಸಂದೀಪ್ ಜೋಶಿ ಚಿತ್ರೋದ್ಯಮ.ಕಾಂ ಬರಹಗಾರರ ತಂಡದ ಬಹು ಮುಖ್ಯ ಸದಸ್ಯ.
ಸಂದೀಪ್ ಜೋಶಿಯವರ ಲೇಖನಗಳಿಗೆ ನಿಮ್ಮದೊಂದು ಮೆಚ್ಚುಗೆಯಿರಲಿ
ಆಗಸ್ಟ್ ತಿಂಗಳ ಮೊದಲ ವಾರದಿಂದ ಚಿತ್ರಮಂದಿರಗಳು,ಸಿನಮಾಗಳನ್ನ ಪ್ರದರ್ಶಿಸಲು ಸಿದ್ದವಾಗ್ತಾ ಇದೆ. 5 ತಿಂಗಳಿಂದ ದೇಶದ-ರಾಜ್ಯದ ಯಾವದೇ ಭಾಗದಲ್ಲೂ ಚಿತ್ರ ಮಂದಿರಗಳು ಕೆಲಸ ಮಾಡುತ್ತಿರಲಿಲ್ಲ. ಸಾಮಾಜಿಕ ಅಂತರ ಕಾಯ್ದುಕೊಳ್ಳಲು,…