ಎಸ್. ವಿ. ರಾಜೇಂದ್ರ ಸಿಂಗ್ ಬಾಬುರವರಿಗೆ ಮಾತೃವಿಯೋಗ

pratimadevi

ನಿರ್ದೇಶಕ ಎಸ್‍ವಿ ರಾಜೇಂದ್ರ ಸಿಂಗ್ ಬಾಬು ಅವರ ತಾಯಿ ಹಿರಿಯ ಕಲಾವಿದೆ ಪ್ರತಿಮಾ ದೇವಿ ಬೆಂಗಳೂರಿನ ಮನೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ ೮೮ ವರ್ಷ ವಯಸ್ಸಾಗಿತ್ತು. ಅವರ ಅಂತ್ಯ ಸಂಸ್ಕಾರ ನಾಳೆ ಮೈಸೂರಿನಲ್ಲಿ ನಡೆಯಲಿದೆ.

ಪ್ರತಿಮಾ ದೇವಿಯವರು ಮೂಲತಃ ಉಡುಪಿಯವರಾಗಿದ್ದು, ಇವರ ಬಾಲ್ಯದ ಹೆಸರು ಮೋಹಿನಿ. ಚಿಕ್ಕಂದಿನಿಂದಲೂ ಇವರಿಗೆ ರಂಗಭೂಮಿಯಲ್ಲಿ ಆಸಕ್ತಿ. ಭಾರತಕ್ಕೆ ಸ್ವಾತಂತ್ರ್ಯ ಬಂದ ವರ್ಷ 1947 ರಲ್ಲೇ ಇವರ ಸಿನಿಮಾ ರಂಗ ಪ್ರವೇಶವಾಯ್ತು. ಸಿ.ವಿ.ರಾಜು ನಿರ್ದೇಶನದ ಕೃಷ್ಣಲೀಲಾ ಇವರು ಅಭಿನಯಿಸಿದ ಮೊದಲ ಸಿನಿಮಾ. ಸಂಪೂರ್ಣ ಪ್ರಮಾಣದ ನಾಯಕಿಯಾಡಿ ಅಭಿನಯಿಸಿದ ಮೊದಲ ಚಿತ್ರ 1951 ರಲ್ಲಿ ತೆರೆಕಂಡ ಶಂಕರ್ ಸಿಂಗ್ ನಿರ್ದೇಶನದ – ಜಗನ್ಮೋಹಿನಿ. ನಾರದ ವಿಜಯ, ವರದಕ್ಷಿಣೆ, ಮುಟ್ಟಿದ್ದೆಲ್ಲಾ ಚಿನ್ನ, ಭಕ್ತಚೇತ ಸೇರಿದಂತೆ ಸುಮಾರು 60 ಚಿತ್ರಗಳಲ್ಲಿ ಅವರು ಅಭಿನಯಿಸಿದ್ದರು. ವಿಷ್ಣುವರ್ಧನ್ ಅಭಿನಯದ ನಾಗರಹಾವು, ಕಮಲ್ ಹಾಸನ್ ರಮೇಶ್ ಅರವಿಂದ್ ಅಭಿನಯದ ರಾಮ ಶಾಮ ಭಾಮ ದಲ್ಲಿ ಕೂಡ ಇವರು ಅಭಿನಯಿಸಿದ್ದರು.

ಕಲಾವಿದರಿಗೆ ಎಂದಿಗೂ ಸಾವಿಲ್ಲ ಎಂಬ ಮಾತಿದೆ. ಹೌದು. ಭೌತಿಕವಾಗಿ ಅವರು ನಮ್ಮಿಂದ ದೂರವಾದರೂ, ಅವರ ಪಾತ್ರಗಳ ಮೂಲಕ ನಮ್ಮ ನೆಡುವೆಯೇ ಎಂದೂ ಇರುತ್ತಾರೆ. ಇವರು ಅಭಿನಯಿಸಿದ ಚಿತ್ರಗಳು, ನಾಟಕಗಳು, ಪಾತ್ರಗಳು ಎಂದೆಂದೂ ನಮ್ಮ ಮನದಲ್ಲಿ ಹಸಿರಾಗಿರಲಿ. ಇವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಆ ಭಗವಂತನಲ್ಲಿ ಚಿತ್ರೋದ್ಯಮ.ಕಾಂ ನ ಪ್ರಾರ್ಥನೆ.

admin (TNS)

admin (TNS)

ಸುಂದರ ಉದ್ಯಾನವನಗಳು, ಸಾಫ್ಟ್ವೇರ್ ಕಂಪನಿಗಳಿಂದ ಚಿರಪರಿಚಿತ ಊರು ಬೆಂಗಳೂರು.ಅಲ್ಲಿಂದ ಸುಮಾರು 100 ಕಿಲೋಮಿಟೆರ್ ದೂರದಲ್ಲಿರುವ ಊರು ಮಧುಗಿರಿ. "ಧರೆಯೊಳೆಲ್ಲೆ ಇರಲಿ ನಾನು ಮರೆಯಲಾರೆ ಮಧುಗಿರಿ" ಎಂದು ಹೊಯ್ಸಳ ದೊರೆಗಳಿಂದ ಹೊಗಳಿಸಿಕೊಂಡ ಇದೇ ಮಧುಗಿರಿ ಯ ತೊಂಡೋಟಿ ಎಂಬ ಒಂದು ಕುಗ್ರಾಮದಲ್ಲಿ ಮಧ್ಯಮ ವರ್ಗದ ಕುಟುಂಬದಲ್ಲಿ ಹುಟ್ಟಿದ ಇವರು ಅದೇ ಊರಿನಲ್ಲಿ ತಮ್ಮ ಪ್ರಾಥಮಿಕ ಶಿಕ್ಷಣ ಮುಗಿಸಿ, ತುಮಕೂರು ಹಾಗು ಬೆಂಗಳೂರಿನಲ್ಲಿ ತಮ್ಮ ಉನ್ನತ ವಿದ್ಯಾಭ್ಯಾಸ ವನ್ನು ಪೂರೈಸಿದರು. ನಂತರ ಮಲೇಷಿಯಾದ ಕೌಲಲಮ್ಪುರದಲ್ಲಿ ಕಂಪ್ಯೂಟರ್ ಇಂಜಿನಿಯರ್ (ಇಂಜಿನ್ ಗೆ ನೀರು ಹಾಕುವ) ಕೆಲಸ ಮಾಡುತ್ತಿದ್ದಾರೆ. ಎಸ್. ಎಲ್ ಭೈರಪ್ಪ, ಬೇಂದ್ರೆ ಯವರ ಕನ್ನಡ ಸಾಹಿತ್ಯದ ಜೊತೆ ಜೊತೆಗೆ ಯಂಡಮೂರಿ, ದೇವುಡು ರವರ ತೆಲುಗು ಸಾಹಿತ್ಯಗಳನ್ನು ಓದುವ ಹವ್ಯಾಸ ಗಳನ್ನೂ ಇಟ್ಟುಕೊಂಡ ಇವರು ಕೆಲವು ಕವನ ಹಾಗು ಕತೆಗಳನ್ನು ಸಹ ಬರೆದಿದ್ದಾರೆ. ಇವರ "ನಾನು ನಾನೇನಾ" ಎಂಬ ಕಾದಂಬರಿ ಇತ್ತೀಚೆಗಷ್ಟೇ ಬಿಡುಗಡೆಯಾಗಿದೆ. ಕನ್ನಡ ಚಿತ್ರೋದ್ಯಮದ ವಿಶಿಷ್ಟ ಸಂಗತಿಗಳನ್ನು ಪರಿಚಯಿಸಲೆಂಬ ಉದ್ದೇಶದಿಂದ ಚಿತ್ರೋದ್ಯಮ.ಕಾಂ ಎಂಬ ಈ ವೆಬ್ಸೈಟ್ ಅನ್ನು ತೆರೆದು ತನ್ಮೂಲಕ ಕನ್ನಡ ಚಿತ್ರೋದ್ಯಮಕ್ಕೆ ತನ್ನ ಅಳಿಲು ಸೇವೆಯನ್ನು ಸಲ್ಲಿಸುತ್ತಿದ್ದಾರೆ.

Leave a Reply