ಕವಿರತ್ನ ಕಾಳಿದಾಸ ನಿರ್ದೇಶಕರು ಇನ್ನಿಲ್ಲ

renukasharma

ಕವಿರತ್ನ ಕಾಳಿದಾಸ ದಂತಹ ಸೂಪರ್ ಹಿಟ್ ಸಿನಿಮಾವನ್ನು ಸ್ಯಾಂಡಲ್ ವುಡ್ ಗೆ ಕೊಡುಗೆಯಾಗಿ ನೀಡಿದ್ದ ಖ್ಯಾತ ನಿರ್ದೇಶಕ ರೇಣುಕಾ ಶರ್ಮ ರವರು ಕೊರೋನಾ ಸೋಂಕಿನಿಂದಾಗಿ ಕೊನೆಯುಸಿರೆಳೆದಿದ್ದಾರೆ. ಕೊರೋನಾ ಸೋಂಕು ಪತ್ತೆಯಾದ ಕೂಡಲೇ ಇವರನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ದುರದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಅನುಪಮಾ ಚಿತ್ರದೊಂದಿಗೆ ನಿರ್ದೇಶನಕ್ಕೆ ಕಾಲಿಟ್ಟ ಇವರು ಕವಿರತ್ನ ಕಾಳಿದಾಸ, ಸತ್ಕಾರ, ಹಠಮಾರಿ ಹೆಣ್ಣು ಕಿಲಾಡಿ ಗಂಡು, ಕೊಲ್ಲೂರು ಶ್ರೀ ಮೂಕಾಂಬಿಕೆ, ಶಬರಿಮಲೆ ಸ್ವಾಮಿ ಅಯ್ಯಪ್ಪ, ಹಾಗು ರವಿಚಂದ್ರನ್ ರ ಎರಡು ಸೂಪರ್ ಹಿಟ್ ಸಿನಿಮಾಗಳಾದ ಕಿಂದರಿ ಜೋಗಿ ಮತ್ತು ಅಂಜದ ಗಂಡು ಚಿತ್ರಗಳ ನಿರ್ದೇಶಕರು ಕೂಡ.
ಇವರ ಆತ್ಮಕ್ಕೆ ಶಾಂತಿ ನೀಡಲೆಂದು ಆ ಭಗವಂತನಲ್ಲಿ ಚಿತ್ರೋದ್ಯಮ.ಕಾಂ ನ ಪ್ರಾರ್ಥನೆ.

admin (TNS)

admin (TNS)

ಸುಂದರ ಉದ್ಯಾನವನಗಳು, ಸಾಫ್ಟ್ವೇರ್ ಕಂಪನಿಗಳಿಂದ ಚಿರಪರಿಚಿತ ಊರು ಬೆಂಗಳೂರು.ಅಲ್ಲಿಂದ ಸುಮಾರು 100 ಕಿಲೋಮಿಟೆರ್ ದೂರದಲ್ಲಿರುವ ಊರು ಮಧುಗಿರಿ. "ಧರೆಯೊಳೆಲ್ಲೆ ಇರಲಿ ನಾನು ಮರೆಯಲಾರೆ ಮಧುಗಿರಿ" ಎಂದು ಹೊಯ್ಸಳ ದೊರೆಗಳಿಂದ ಹೊಗಳಿಸಿಕೊಂಡ ಇದೇ ಮಧುಗಿರಿ ಯ ತೊಂಡೋಟಿ ಎಂಬ ಒಂದು ಕುಗ್ರಾಮದಲ್ಲಿ ಮಧ್ಯಮ ವರ್ಗದ ಕುಟುಂಬದಲ್ಲಿ ಹುಟ್ಟಿದ ಇವರು ಅದೇ ಊರಿನಲ್ಲಿ ತಮ್ಮ ಪ್ರಾಥಮಿಕ ಶಿಕ್ಷಣ ಮುಗಿಸಿ, ತುಮಕೂರು ಹಾಗು ಬೆಂಗಳೂರಿನಲ್ಲಿ ತಮ್ಮ ಉನ್ನತ ವಿದ್ಯಾಭ್ಯಾಸ ವನ್ನು ಪೂರೈಸಿದರು. ನಂತರ ಮಲೇಷಿಯಾದ ಕೌಲಲಮ್ಪುರದಲ್ಲಿ ಕಂಪ್ಯೂಟರ್ ಇಂಜಿನಿಯರ್ (ಇಂಜಿನ್ ಗೆ ನೀರು ಹಾಕುವ) ಕೆಲಸ ಮಾಡುತ್ತಿದ್ದಾರೆ. ಎಸ್. ಎಲ್ ಭೈರಪ್ಪ, ಬೇಂದ್ರೆ ಯವರ ಕನ್ನಡ ಸಾಹಿತ್ಯದ ಜೊತೆ ಜೊತೆಗೆ ಯಂಡಮೂರಿ, ದೇವುಡು ರವರ ತೆಲುಗು ಸಾಹಿತ್ಯಗಳನ್ನು ಓದುವ ಹವ್ಯಾಸ ಗಳನ್ನೂ ಇಟ್ಟುಕೊಂಡ ಇವರು ಕೆಲವು ಕವನ ಹಾಗು ಕತೆಗಳನ್ನು ಸಹ ಬರೆದಿದ್ದಾರೆ. ಇವರ "ನಾನು ನಾನೇನಾ" ಎಂಬ ಕಾದಂಬರಿ ಇತ್ತೀಚೆಗಷ್ಟೇ ಬಿಡುಗಡೆಯಾಗಿದೆ. ಕನ್ನಡ ಚಿತ್ರೋದ್ಯಮದ ವಿಶಿಷ್ಟ ಸಂಗತಿಗಳನ್ನು ಪರಿಚಯಿಸಲೆಂಬ ಉದ್ದೇಶದಿಂದ ಚಿತ್ರೋದ್ಯಮ.ಕಾಂ ಎಂಬ ಈ ವೆಬ್ಸೈಟ್ ಅನ್ನು ತೆರೆದು ತನ್ಮೂಲಕ ಕನ್ನಡ ಚಿತ್ರೋದ್ಯಮಕ್ಕೆ ತನ್ನ ಅಳಿಲು ಸೇವೆಯನ್ನು ಸಲ್ಲಿಸುತ್ತಿದ್ದಾರೆ.

Leave a Reply