“ಕಸ್ತೂರಿಮಹಲ್”ನ ನಾಯಕಿ ಶಾನ್ವಿ ಶ್ರೀವತ್ಸ !

ಖ್ಯಾತ ನಿರ್ದೇಶಕರಾದ ದಿನೇಶ್ ಬಾಬು ಅವರು ನಿರ್ದೇಶಿಸುತ್ತಿರುವ ಕಸ್ತೂರಿ ಮಹಲ್ ಅನ್ನುವ ಥ್ರಿಲ್ಲರ್- ಹಾರಾರ್  ಸಿನಿಮಾದಲ್ಲಿ ನಾಯಕಿಯಾಗಿ ರಚಿತಾರಾಮ್ಆಯ್ಕೆಯಾಗಿದ್ದರು ಮೊದಲ ಹಂತದ ಶೂಟಿಂಗ್ ಕೆಲಸ ಕೂಡ ನಡೆದಿತ್ತು, ಸ್ಕ್ರಿಪ್ಟ್ ನಲ್ಲಿ ಕೆಲವು ಅಂಶಗಳನ್ನ ಬದಲಾಯಿಸಲು ರಚಿತ, ನಿರ್ದೇಶಕರಿಗೆ ಒತ್ತಾಯಿಸಿದ್ದಾರೆ, ಅದಕ್ಕೆ ನಿರ್ದೇಶಕರು ಒಪ್ಪದ ಕಾರಣ ಸಿನಿಮಾದಿಂದ ಹೋರಬಂದಿದ್ದಾರೆ.  ಸಿನಿಮಾದಲ್ಲಿ ರಚಿತಾ ರಾಮ ಬದಲು ಮಾಸ್ಟರ್ ಪೀಸ್ ಖ್ಯಾತಿಯ “ಶಾನ್ವಿ ಶ್ರೀವತ್ಸ” ಅಭಿನಯಿಸಿದ್ದಾರೆ.

ಚಿತ್ರಕ್ಕೆಅಗತ್ಯವಿರುವ ಮೊದಲ ಫೋಟೋ ಶೂಟ್ ಕೂಡ ಮುಗಿಸಿದ್ದಾರೆ ಅವುಗಳ ಫೋಟೋ ಇಲ್ಲಿದೆ. ಮತ್ತೊಂದು ವಿಶೇಷ ಅಂದ್ರೆ ಇದು ದಿನೇಶ ಬಾಬು ಅವರು ನಿರ್ದೇಶಿಸುತ್ತಿರುವ 50ನೆ ಸಿನಿಮಾ.

admin (TNS)

admin (TNS)

ಸುಂದರ ಉದ್ಯಾನವನಗಳು, ಸಾಫ್ಟ್ವೇರ್ ಕಂಪನಿಗಳಿಂದ ಚಿರಪರಿಚಿತ ಊರು ಬೆಂಗಳೂರು.ಅಲ್ಲಿಂದ ಸುಮಾರು 100 ಕಿಲೋಮಿಟೆರ್ ದೂರದಲ್ಲಿರುವ ಊರು ಮಧುಗಿರಿ. "ಧರೆಯೊಳೆಲ್ಲೆ ಇರಲಿ ನಾನು ಮರೆಯಲಾರೆ ಮಧುಗಿರಿ" ಎಂದು ಹೊಯ್ಸಳ ದೊರೆಗಳಿಂದ ಹೊಗಳಿಸಿಕೊಂಡ ಇದೇ ಮಧುಗಿರಿ ಯ ತೊಂಡೋಟಿ ಎಂಬ ಒಂದು ಕುಗ್ರಾಮದಲ್ಲಿ ಮಧ್ಯಮ ವರ್ಗದ ಕುಟುಂಬದಲ್ಲಿ ಹುಟ್ಟಿದ ಇವರು ಅದೇ ಊರಿನಲ್ಲಿ ತಮ್ಮ ಪ್ರಾಥಮಿಕ ಶಿಕ್ಷಣ ಮುಗಿಸಿ, ತುಮಕೂರು ಹಾಗು ಬೆಂಗಳೂರಿನಲ್ಲಿ ತಮ್ಮ ಉನ್ನತ ವಿದ್ಯಾಭ್ಯಾಸ ವನ್ನು ಪೂರೈಸಿದರು. ನಂತರ ಮಲೇಷಿಯಾದ ಕೌಲಲಮ್ಪುರದಲ್ಲಿ ಕಂಪ್ಯೂಟರ್ ಇಂಜಿನಿಯರ್ (ಇಂಜಿನ್ ಗೆ ನೀರು ಹಾಕುವ) ಕೆಲಸ ಮಾಡುತ್ತಿದ್ದಾರೆ. ಎಸ್. ಎಲ್ ಭೈರಪ್ಪ, ಬೇಂದ್ರೆ ಯವರ ಕನ್ನಡ ಸಾಹಿತ್ಯದ ಜೊತೆ ಜೊತೆಗೆ ಯಂಡಮೂರಿ, ದೇವುಡು ರವರ ತೆಲುಗು ಸಾಹಿತ್ಯಗಳನ್ನು ಓದುವ ಹವ್ಯಾಸ ಗಳನ್ನೂ ಇಟ್ಟುಕೊಂಡ ಇವರು ಕೆಲವು ಕವನ ಹಾಗು ಕತೆಗಳನ್ನು ಸಹ ಬರೆದಿದ್ದಾರೆ. ಇವರ "ನಾನು ನಾನೇನಾ" ಎಂಬ ಕಾದಂಬರಿ ಇತ್ತೀಚೆಗಷ್ಟೇ ಬಿಡುಗಡೆಯಾಗಿದೆ. ಕನ್ನಡ ಚಿತ್ರೋದ್ಯಮದ ವಿಶಿಷ್ಟ ಸಂಗತಿಗಳನ್ನು ಪರಿಚಯಿಸಲೆಂಬ ಉದ್ದೇಶದಿಂದ ಚಿತ್ರೋದ್ಯಮ.ಕಾಂ ಎಂಬ ಈ ವೆಬ್ಸೈಟ್ ಅನ್ನು ತೆರೆದು ತನ್ಮೂಲಕ ಕನ್ನಡ ಚಿತ್ರೋದ್ಯಮಕ್ಕೆ ತನ್ನ ಅಳಿಲು ಸೇವೆಯನ್ನು ಸಲ್ಲಿಸುತ್ತಿದ್ದಾರೆ.

Leave a Reply