ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಲೋಗೋ ಬಿಡುಗಡೆ

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವನ್ನುಮಾರ್ಚ್ 23 ರಿಂದ 30 ರವರೆಗೆ ನಡೆಸಲು ಉದ್ದೇಶಿಸಲಾಗಿದೆ. ಈ ಚಿತ್ರೋತ್ಸವ ಹಬ್ಬದ ಅಧಿಕೃತ ಲಾಂಛನವನ್ನು ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಯವರು ಫೆಬ್ರವರಿ 7 ನೇ ತಾರೀಕು ಮಂಗಳವಾರ ಬೆಂಗಳೂರಿನಲ್ಲಿ ಬಿಡುಗಡೆ ಮಾಡಿದರು. ಬೆಂಗಳೂರಿನ ಅಟಲ್ ಬಿಹಾರಿ ವಾಜಪೇಯಿ ಕ್ರೀಡಾಂಗಣದಲ್ಲಿ ಪುನೀತ್ ರಾಜ್‌ಕುಮಾರ್ ರಸ್ತೆ ಉದ್ಘಾಟನಾ ಸಮಾರಂಭಕ್ಕೆ ಆಗಮಿಸಿದ್ದ ಮುಖ್ಯಮಂತ್ರಿಗಳು ಲೋಗೋವನ್ನು ಅನಾವರಣಗೊಳಿಸಿದರು. ಈ ಸಂದರ್ಭದಲ್ಲಿ ಚಲನಚಿತ್ರ ವಾಣಿಜ್ಯ ಮಂಡಳಿಯ ಸದಸ್ಯರು ಹಾಗು ನಟ-ನಟಿಯರು ಭಾಗವಹಿಸಿದ್ದರು.

admin (TNS)

admin (TNS)

ಸುಂದರ ಉದ್ಯಾನವನಗಳು, ಸಾಫ್ಟ್ವೇರ್ ಕಂಪನಿಗಳಿಂದ ಚಿರಪರಿಚಿತ ಊರು ಬೆಂಗಳೂರು.ಅಲ್ಲಿಂದ ಸುಮಾರು 100 ಕಿಲೋಮಿಟೆರ್ ದೂರದಲ್ಲಿರುವ ಊರು ಮಧುಗಿರಿ. "ಧರೆಯೊಳೆಲ್ಲೆ ಇರಲಿ ನಾನು ಮರೆಯಲಾರೆ ಮಧುಗಿರಿ" ಎಂದು ಹೊಯ್ಸಳ ದೊರೆಗಳಿಂದ ಹೊಗಳಿಸಿಕೊಂಡ ಇದೇ ಮಧುಗಿರಿ ಯ ತೊಂಡೋಟಿ ಎಂಬ ಒಂದು ಕುಗ್ರಾಮದಲ್ಲಿ ಮಧ್ಯಮ ವರ್ಗದ ಕುಟುಂಬದಲ್ಲಿ ಹುಟ್ಟಿದ ಇವರು ಅದೇ ಊರಿನಲ್ಲಿ ತಮ್ಮ ಪ್ರಾಥಮಿಕ ಶಿಕ್ಷಣ ಮುಗಿಸಿ, ತುಮಕೂರು ಹಾಗು ಬೆಂಗಳೂರಿನಲ್ಲಿ ತಮ್ಮ ಉನ್ನತ ವಿದ್ಯಾಭ್ಯಾಸ ವನ್ನು ಪೂರೈಸಿದರು. ನಂತರ ಮಲೇಷಿಯಾದ ಕೌಲಲಮ್ಪುರದಲ್ಲಿ ಕಂಪ್ಯೂಟರ್ ಇಂಜಿನಿಯರ್ (ಇಂಜಿನ್ ಗೆ ನೀರು ಹಾಕುವ) ಕೆಲಸ ಮಾಡುತ್ತಿದ್ದಾರೆ. ಎಸ್. ಎಲ್ ಭೈರಪ್ಪ, ಬೇಂದ್ರೆ ಯವರ ಕನ್ನಡ ಸಾಹಿತ್ಯದ ಜೊತೆ ಜೊತೆಗೆ ಯಂಡಮೂರಿ, ದೇವುಡು ರವರ ತೆಲುಗು ಸಾಹಿತ್ಯಗಳನ್ನು ಓದುವ ಹವ್ಯಾಸ ಗಳನ್ನೂ ಇಟ್ಟುಕೊಂಡ ಇವರು ಕೆಲವು ಕವನ ಹಾಗು ಕತೆಗಳನ್ನು ಸಹ ಬರೆದಿದ್ದಾರೆ. ಇವರ "ನಾನು ನಾನೇನಾ" ಎಂಬ ಕಾದಂಬರಿ ಇತ್ತೀಚೆಗಷ್ಟೇ ಬಿಡುಗಡೆಯಾಗಿದೆ. ಕನ್ನಡ ಚಿತ್ರೋದ್ಯಮದ ವಿಶಿಷ್ಟ ಸಂಗತಿಗಳನ್ನು ಪರಿಚಯಿಸಲೆಂಬ ಉದ್ದೇಶದಿಂದ ಚಿತ್ರೋದ್ಯಮ.ಕಾಂ ಎಂಬ ಈ ವೆಬ್ಸೈಟ್ ಅನ್ನು ತೆರೆದು ತನ್ಮೂಲಕ ಕನ್ನಡ ಚಿತ್ರೋದ್ಯಮಕ್ಕೆ ತನ್ನ ಅಳಿಲು ಸೇವೆಯನ್ನು ಸಲ್ಲಿಸುತ್ತಿದ್ದಾರೆ.

Leave a Reply