ಬೆಳ್ಳಿತೆರೆಯತ್ತ ಪರಮೇಶ್ವರ್ ಗುಂಡ್ಕಲ್

parameshwar gundkal

ಕನ್ನಡ ಸಿನಿಪ್ರಿಯರಿಗೆ ಮತ್ತೊಂದು ಶುಭಸುದ್ದಿ. ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ (Bigg boss kannada) ಯಶಸ್ಸಿನ ತೆರೆಹಿಂದಿನ ಹೆಸರು ಪರಮೇಶ್ವರ್ ಗುಂಡ್ಕಲ್ (parameshvar gundkal). ಕಿರಿತೆರೆಯ ಅದರಲ್ಲೂ ರಿಯಾಲಿಟಿ ಷೋಗಳ ಯಶಸ್ಸಿನ ನಂತರ ಇವರು ಇದೀಗ ಹೊಸ ಸಾಹಸವೊಂದಕ್ಕೆ ಕೈ ಹಾಕಿದ್ದಾರೆ. ಹೌದು. ಜಿಯೋ ಸ್ಟುಡಿಯೋಸ್ (ಕನ್ನಡ) ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡಿದ್ದರಷ್ಟೇ ಅಲ್ಲದೆ, ಸಿನಿಮಾ ನಿರ್ಮಾಣಗಳತ್ತ ಮುಖ ಮಾಡಿದ್ದಾರೆ. ನಟರಾಕ್ಷಸ ಡಾಲಿ ಧನಂಜಯ (Daali Dhananjaya) ನಾಯಕನಾಗಿ ಇವರ ಮೊದಲ ಸಿನಿಮಾದಲ್ಲಿ ನಟಿಸುತ್ತಿದ್ದಾರೆ ಎಂದೂ ಕೂಡ ಹೇಳಲಾಗುತ್ತಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಮುಂದಿನ ತಿಂಗಳು ಅಂದರೆ ಮೇ ಮೊದಲ ವಾರದಲ್ಲೇ ಚಿತ್ರೀಕರಣ ಪ್ರಾರಂಭವಾಗಲಿದೆ.

admin (TNS)

admin (TNS)

ಸುಂದರ ಉದ್ಯಾನವನಗಳು, ಸಾಫ್ಟ್ವೇರ್ ಕಂಪನಿಗಳಿಂದ ಚಿರಪರಿಚಿತ ಊರು ಬೆಂಗಳೂರು.ಅಲ್ಲಿಂದ ಸುಮಾರು 100 ಕಿಲೋಮಿಟೆರ್ ದೂರದಲ್ಲಿರುವ ಊರು ಮಧುಗಿರಿ. "ಧರೆಯೊಳೆಲ್ಲೆ ಇರಲಿ ನಾನು ಮರೆಯಲಾರೆ ಮಧುಗಿರಿ" ಎಂದು ಹೊಯ್ಸಳ ದೊರೆಗಳಿಂದ ಹೊಗಳಿಸಿಕೊಂಡ ಇದೇ ಮಧುಗಿರಿ ಯ ತೊಂಡೋಟಿ ಎಂಬ ಒಂದು ಕುಗ್ರಾಮದಲ್ಲಿ ಮಧ್ಯಮ ವರ್ಗದ ಕುಟುಂಬದಲ್ಲಿ ಹುಟ್ಟಿದ ಇವರು ಅದೇ ಊರಿನಲ್ಲಿ ತಮ್ಮ ಪ್ರಾಥಮಿಕ ಶಿಕ್ಷಣ ಮುಗಿಸಿ, ತುಮಕೂರು ಹಾಗು ಬೆಂಗಳೂರಿನಲ್ಲಿ ತಮ್ಮ ಉನ್ನತ ವಿದ್ಯಾಭ್ಯಾಸ ವನ್ನು ಪೂರೈಸಿದರು. ನಂತರ ಮಲೇಷಿಯಾದ ಕೌಲಲಮ್ಪುರದಲ್ಲಿ ಕಂಪ್ಯೂಟರ್ ಇಂಜಿನಿಯರ್ (ಇಂಜಿನ್ ಗೆ ನೀರು ಹಾಕುವ) ಕೆಲಸ ಮಾಡುತ್ತಿದ್ದಾರೆ. ಎಸ್. ಎಲ್ ಭೈರಪ್ಪ, ಬೇಂದ್ರೆ ಯವರ ಕನ್ನಡ ಸಾಹಿತ್ಯದ ಜೊತೆ ಜೊತೆಗೆ ಯಂಡಮೂರಿ, ದೇವುಡು ರವರ ತೆಲುಗು ಸಾಹಿತ್ಯಗಳನ್ನು ಓದುವ ಹವ್ಯಾಸ ಗಳನ್ನೂ ಇಟ್ಟುಕೊಂಡ ಇವರು ಕೆಲವು ಕವನ ಹಾಗು ಕತೆಗಳನ್ನು ಸಹ ಬರೆದಿದ್ದಾರೆ. ಇವರ "ನಾನು ನಾನೇನಾ" ಎಂಬ ಕಾದಂಬರಿ ಇತ್ತೀಚೆಗಷ್ಟೇ ಬಿಡುಗಡೆಯಾಗಿದೆ. ಕನ್ನಡ ಚಿತ್ರೋದ್ಯಮದ ವಿಶಿಷ್ಟ ಸಂಗತಿಗಳನ್ನು ಪರಿಚಯಿಸಲೆಂಬ ಉದ್ದೇಶದಿಂದ ಚಿತ್ರೋದ್ಯಮ.ಕಾಂ ಎಂಬ ಈ ವೆಬ್ಸೈಟ್ ಅನ್ನು ತೆರೆದು ತನ್ಮೂಲಕ ಕನ್ನಡ ಚಿತ್ರೋದ್ಯಮಕ್ಕೆ ತನ್ನ ಅಳಿಲು ಸೇವೆಯನ್ನು ಸಲ್ಲಿಸುತ್ತಿದ್ದಾರೆ.

Leave a Reply