ಮಂಡ್ಯದ ಗಂಡು

ಕನ್ನಡ ಚಿತ್ರರಂಗದ ಕಲಿಯುಗದ ಕರ್ಣ ಎಂದು ಬಿರುದು ಪಡೆದಿರುವ ಮಂಡ್ಯದ ಗಂಡು ನಟ ರೆಬೆಲ್ ಸ್ಟಾರ್ ಡಾ.ಅಂಬರೀಷ್ ಇವರ ಬಗ್ಗೆ ತಿಳಿಯದವರು ಯಾರಾದರೂ ಇದ್ದಾರೆಯೇ?

ಖಂಡಿತವಾಗಿಯೂ ಇಲ್ಲ.

ಜೀವನದಲ್ಲಿ ಹಣ ಗಳಿಸಿದ್ದಕ್ಕಿಂತಲೂ ಇವರು ಗಳಿಸಿರುವ ಸ್ನೇಹಕ್ಕೆ ಲೆಕ್ಕವಿಲ್ಲವಾದರೆ ವರ್ಣಿಸಲು ಸಾಧ್ಯವಾಗದಷ್ಟು ಅಭಿಮಾನ ಮತ್ತು ಪ್ರೀತಿಯನ್ನು ಅಭಿಮಾನಿಗಳಿಂದ ಸಂಪಾದಿಸಿರುವ ಇವರು ಕನ್ನಡ ಚಿತ್ರರಂಗದ ಆಸ್ತಿ ಕೂಡ ಹೌದು. ಇವರು ತಮ್ಮ ನಲವತ್ತು ವರ್ಷಗಳ ಬಣ್ಣದ ಬದುಕಿನಲ್ಲಿ ಕನ್ನಡ, ತಮಿಳು,ಹಿಂದಿ ಸೇರಿದಂತೆ ಸುಮಾರು ೨೨೦ ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಇವರು ನಟಿಸಿದ ಚಿತ್ರಗಳಲ್ಲಿ ಹಲವಾರು ಪಾತ್ರಗಳನ್ನು  ನಿರ್ವಹಿಸಿದ್ದು ಕೆಲವು ಪಾತ್ರಗಳನ್ನು ಅಭಿಮಾನಿಗಳು ಇಂದಿಗೂ ಮರೆತಿಲ್ಲ ಮತ್ತು ಮರೆಯಲು ಸಾಧ್ಯವಿಲ್ಲ. ಇಲ್ಲಿ ರೆಬೆಲ್ ಸ್ಟಾರ್ ಡಾ.ಅಂಬರೀಷ್ ಅಭಿನಯಿಸಿದ ಚಿತ್ರಗಳಲ್ಲಿ ಹಲವು ಚಿತ್ರಗಳನ್ನು ಆರಿಸಿಕೊಂಡು ಅವುಗಳನ್ನು ವೀಕ್ಷಿಸಿ ವಿಮರ್ಶೆ ಮಾಡಲಾಗಿದೆ.

ನಿರೀಕ್ಷಿಸಿ

ಲೇಖಕರು : ಶ್ರೀ ಸಂದೀಪ್ ಜೋಶಿ

ಸಂದೀಪ ಜೋಶಿ

ಸಂದೀಪ ಜೋಶಿ

ಸಂದೀಪ್ ಜೋಶಿ - ಇವರು ಕೊಪ್ಪಳ ಜಿಲ್ಲೆಯ ಗಂಗಾವತಿ ನಿವಾಸಿಯಾಗಿದ್ದು ಪ್ರಸ್ತುತ ಸ್ವ ಉದ್ಯೋಗದಲ್ಲಿ ತೊಡಗಿಕೊಂಡಿದ್ದಾರೆ. ಬಿ.ಎ.ಮತ್ತು ಡಿಪ್ಲೊಮಾ ಇನ್ ಹಾರ್ಟಿಕಲ್ಚರ್, ಸಿ.ಟಿ.ಟಿ.ಸಿ ತರಬೇತಿ, ರೇಕಿ ಚಿಕಿತ್ಸೆ ತರಬೇತಿಯನ್ನು ಪಡೆದಿದ್ದು 13 ವರ್ಷಗಳ ಕಾಲ ರಾಯಚೂರು, ಧಾರವಾಡ ಕೃಷಿ ವಿಶ್ವವಿದ್ಯಾಲಯ ಮತ್ತು ಬಾಗಲಕೋಟೆಯ ತೋಟಗಾರಿಕೆ ವಿಶ್ವವಿದ್ಯಾನಿಲಯದಲ್ಲಿ ಕ್ಷೇತ್ರ ಸಹಾಯಕ, ಗಣಕಯಂತ್ರ ನಿರ್ವಾಹಕ ಕೆಲಸವನ್ನು ನಿರ್ವಹಿಸಿದ್ದಾರೆ. ಇವರು ಲೇಖಕರಷ್ಟೇ ಅಲ್ಲ.‌ನಟರು ಕೂಡ. ವೃತ್ತಿಯ ಜೊತೆಗೆ ರೇಕಿ ಚಿಕಿತ್ಸೆ ಮತ್ತು ಸಮಾಜ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಚಿತ್ರರಂಗದ ಕೆಲವು ವಿಶಿಷ್ಟ ವಿಷಯಗಳ ಬಗ್ಗೆ ತಾನೇ ಅಲ್ಲಿ ಇಲ್ಲಿ ಸಂಶೋಧಿಸಿ, ಕೇಳಿ, ಓದಿ ತಿಳಿದ ವಿಷಯಗಳನ್ನೆಲ್ಲಾ ಒಂದೆಡೆ ಕೂಡಿಟ್ಟು, ಚಿತ್ರೋದ್ಯಮದ ಓದುಗರೊಂದಿಗೆ ಹಂಚಿಕೊಳ್ಳಲಿದ್ದಾರೆ. ಸಂದೀಪ್‌ ಜೋಶಿ ಚಿತ್ರೋದ್ಯಮ.ಕಾಂ ಬರಹಗಾರರ ತಂಡದ ಬಹು ಮುಖ್ಯ ಸದಸ್ಯ. ಸಂದೀಪ್ ಜೋಶಿಯವರ ಲೇಖನಗಳಿಗೆ ನಿಮ್ಮದೊಂದು ಮೆಚ್ಚುಗೆಯಿರಲಿ

Leave a Reply