ವಿಮರ್ಶಕರಿಂದ ಮೆಚ್ಚುಗೆ ಪಡೆದ indian 2

kamal hassan ಗೆ kiccha sudeep ಬೆಂಬಲ- ‘ಇಂಡಿಯನ್-2’ ಫಸ್ಟ್ ಗ್ಲಿಂಪ್ಸ್ ಔಟ್ ತಮಿಳಿನ ಖ್ಯಾತ ನಿರ್ದೇಶಕ ಎಸ್.ಶಂಕರ್ ನಿರ್ದೇಶನದ ಬಹು ನಿರೀಕ್ಷಿತ ಸಿನಿಮಾ ‘ಇಂಡಿಯನ್ 2’ (Indian 2) ಪ್ರೇಕ್ಷಕರಲ್ಲಿ ಈಗಾಗಲೇ ಸಾಕಷ್ಟು ಕುತೂಹಲ ಮೂಡಿಸಿದೆ. ಇಂದು ಚಿತ್ರದ ಫಸ್ಟ್ ಗ್ಲಿಂಪ್ಸ್ ಹೊರಬಿದ್ದಿದೆ. ಅನ್ಯಾಯದ ವಿರುದ್ಧ ಕಮಲ್ ಹಾಸನ್ ಹೇಗೆಲ್ಲಾ ಹೋರಾಟ ಮಾಡ್ತಾರೆ ಅನ್ನೋದನ್ನು ಸೀಕ್ವೆಲ್ ನಲ್ಲಿ ಕಟ್ಟಿಕೊಡಲಾಗಿದೆ.

‘ಇಂಡಿಯನ್ 2’ ಚಿತ್ರ 1996ರಲ್ಲಿ ಮೂಡಿಬಂದ ‘ಇಂಡಿಯನ್’ನ ಮುಂದುವರಿದ ಭಾಗ. ಸೌತ್ ಸಿನಿಮಾ ಇಂಡಸ್ಟ್ರಿಯ ಸೂಪರ್ ಸ್ಟಾರ್ ಕಮಲ್ ಹಾಸನ್ ಅವರು ಸೇನಾಪತಿ ಪಾತ್ರದಲ್ಲಿ ಮಿಂಚಿದ್ದರು. ಅದರ ಮುಂದುವರೆದ ಭಾಗವಾಗಿರುವ ‌’ಇಂಡಿಯನ್-2’ ಇಂಟ್ರೋ ವೀಡಿಯೋ ಐದು ಭಾಷೆಯಲ್ಲಿ ಬಿಡುಗಡೆಯಾಗಿದೆ. ಕನ್ನಡದಲ್ಲಿ ಕಿಚ್ಚ ಸುದೀಪ್ (Kichcha Sudeep), ತಮಿಳಿನಲ್ಲಿ ರಜನಿಕಾಂತ್, ಹಿಂದಿ ಆಮಿರ್ ಖಾನ್, ತೆಲುಗಿನಲ್ಲಿ ರಾಜಮೌಳಿ, ಮಲಯಾಳಂನಲ್ಲಿ ಮೋಹನ್ ಲಾಲ್ ಇಂಡಿಯನ್-2 ಸಿನಿಮಾದ ಇಂಟ್ರೋ ವಿಡಿಯೋ ಅನಾವರಣ ಮಾಡಿದ್ದಾರೆ


ಲೈಕಾ ಪ್ರೊಡಕ್ಷನ್ಸ್ ಮತ್ತು ರೆಡ್ ಜೈಂಟ್ ಮೂವೀಸ್ ಬ್ಯಾನರ್ ನಡಿ ಇಂಡಿಯನ್-2 ನಿರ್ಮಾಣವಾಗಿದ್ದು, ಹಿರಿಯ ಸ್ವಾತಂತ್ರ‍್ಯ ಹೋರಾಟಗಾರ ಭ್ರಷ್ಟಾಚಾರ – ಅಪರಾಧ ಚಟುವಟಿಕೆಗಳ ವಿರುದ್ಧ ನಿಲ್ಲುವ ಕಥೆಯನ್ನು ಒಳಗೊಂಡಿದೆ ಹೀಗಾಗಿ ಸಿನಿ ಪ್ರಿಯರಿಗೂ ಹಾಗು ವಿಮರ್ಶಕರಿಗೂ ಕುತೂಹಲ ಕೆರಳಿಸಿದೆ.

Chitrodyama Updates

Chitrodyama Updates

Leave a Reply