ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಪುಷ್ಪ ಸಿನಿಮಾ ರಿಲೀಸ್ ಡೇಟ್ ಅನೌನ್ಸ್

ಕಳೆದ ವರ್ಷದಿಂದ ದೇಶಾದ್ಯಂತ ತೀವ್ರ ಸಂಚಲನವನ್ನು ಮೂಡಿಸಿರುವ ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ನಟಿಸಿದ ಬಹು ನಿರೀಕ್ಷೆಯ  ಸಿನಿಮಾ ಪುಷ್ಪ ದಿ ರೈಸ್  ಡಿಸೆಂಬರ್ 17, 2021 ರಂದು ದೇಶಾದ್ಯಂತ ತೆರೆಗೆ ಬರಲಿದ್ದು ಎರಡು ಭಾಗಗಳಲ್ಲಿ ಬಿಡುಗಡೆಯಾಗುತ್ತಿದೆ.


ಪಂಚ ಭಾಷೆಗಳಲ್ಲಿ ಬರಲಿದ್ದು ಮಲೆಯಾಳಂ ಚಿತ್ರಗಳ ನಾಯಕ ನಟ ಫಹಾದ್ ಫಾಜೀಲ್, ರಶ್ಮಿಕಾ ಮಂದಣ್ಣ, ಜಗಪತಿ ಬಾಬು,ಸಮುತಿರಕನಿ ಮತ್ತು ಟಗರು ಖ್ಯಾತಿಯ ಡಾಲಿ ಧನಂಜಯ್ ಸೇರಿ ಅನೇಕ ಪ್ರಮುಖ ಕಲಾವಿದರು ಈ ಚಿತ್ರದಲ್ಲಿ ನಟಿ‌ಸಿದ್ದಾರೆ.
ರಕ್ತ ಚಂದನ ಕಳ್ಳ ಸಾಗಾಣಿಕೆ ಕುರಿತ ಕಥೆಯನ್ನು ಹೊಂದಿರುವ ಈ ಚಿತ್ರವನ್ನು ಸೆನ್ಸೇಷನ್ ನಿರ್ದೇಶಕ ಎಂದೇ ಪ್ರಸಿದ್ಧಿಯನ್ನು ಪಡೆದಿರುವ ನಿರ್ದೇಶಕ ಸುಕುಮಾರ್ ನಿರ್ದೇಶಿಸಿರುವುದು ಚಿತ್ರ ಪ್ರೇಮಿಗಳಲ್ಲಿ ನಿರೀಕ್ಷೆಯನ್ನು ಇಮ್ಮಡಿಗೊಳಿಸಿದೆ.

ಸಂದೀಪ ಜೋಶಿ

ಸಂದೀಪ ಜೋಶಿ

ಸಂದೀಪ್ ಜೋಶಿ - ಇವರು ಕೊಪ್ಪಳ ಜಿಲ್ಲೆಯ ಗಂಗಾವತಿ ನಿವಾಸಿಯಾಗಿದ್ದು ಪ್ರಸ್ತುತ ಸ್ವ ಉದ್ಯೋಗದಲ್ಲಿ ತೊಡಗಿಕೊಂಡಿದ್ದಾರೆ. ಬಿ.ಎ.ಮತ್ತು ಡಿಪ್ಲೊಮಾ ಇನ್ ಹಾರ್ಟಿಕಲ್ಚರ್, ಸಿ.ಟಿ.ಟಿ.ಸಿ ತರಬೇತಿ, ರೇಕಿ ಚಿಕಿತ್ಸೆ ತರಬೇತಿಯನ್ನು ಪಡೆದಿದ್ದು 13 ವರ್ಷಗಳ ಕಾಲ ರಾಯಚೂರು, ಧಾರವಾಡ ಕೃಷಿ ವಿಶ್ವವಿದ್ಯಾಲಯ ಮತ್ತು ಬಾಗಲಕೋಟೆಯ ತೋಟಗಾರಿಕೆ ವಿಶ್ವವಿದ್ಯಾನಿಲಯದಲ್ಲಿ ಕ್ಷೇತ್ರ ಸಹಾಯಕ, ಗಣಕಯಂತ್ರ ನಿರ್ವಾಹಕ ಕೆಲಸವನ್ನು ನಿರ್ವಹಿಸಿದ್ದಾರೆ. ಇವರು ಲೇಖಕರಷ್ಟೇ ಅಲ್ಲ.‌ನಟರು ಕೂಡ. ವೃತ್ತಿಯ ಜೊತೆಗೆ ರೇಕಿ ಚಿಕಿತ್ಸೆ ಮತ್ತು ಸಮಾಜ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಚಿತ್ರರಂಗದ ಕೆಲವು ವಿಶಿಷ್ಟ ವಿಷಯಗಳ ಬಗ್ಗೆ ತಾನೇ ಅಲ್ಲಿ ಇಲ್ಲಿ ಸಂಶೋಧಿಸಿ, ಕೇಳಿ, ಓದಿ ತಿಳಿದ ವಿಷಯಗಳನ್ನೆಲ್ಲಾ ಒಂದೆಡೆ ಕೂಡಿಟ್ಟು, ಚಿತ್ರೋದ್ಯಮದ ಓದುಗರೊಂದಿಗೆ ಹಂಚಿಕೊಳ್ಳಲಿದ್ದಾರೆ. ಸಂದೀಪ್‌ ಜೋಶಿ ಚಿತ್ರೋದ್ಯಮ.ಕಾಂ ಬರಹಗಾರರ ತಂಡದ ಬಹು ಮುಖ್ಯ ಸದಸ್ಯ. ಸಂದೀಪ್ ಜೋಶಿಯವರ ಲೇಖನಗಳಿಗೆ ನಿಮ್ಮದೊಂದು ಮೆಚ್ಚುಗೆಯಿರಲಿ

Leave a Reply