ಹಿರಿಯ ನಟಿ Leelavathi ಇನ್ನಿಲ್ಲ

ಕನ್ನಡ ಸಿನಿಮಾ ರಂಗದ ಖ್ಯಾತ ಹಿರಿಯ ನಟಿ ಲೀಲಾವತಿ ಅವರು ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ. ಅವರ ಆರೋಗ್ಯ ಏರುಪೇರಾಗಿದ್ದ ಹಿನ್ನೆಲೆಯಲ್ಲಿ ಅವರನ್ನು ಕೆಲ ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರ ಆರೋಗ್ಯದಲ್ಲಿ ತಕ್ಕಮಟ್ಟಿನ ಚೇತರಿಕೆ ಕಂಡುಬಂದಿತ್ತಾದರೂ ಇಂದು ಮಧ್ಯಾಹ್ನ ದಿಢೀರ್ ಅಂತ ಲೋ ಬಿಪಿ ಸಮಸ್ಯೆ ಶುರುವಾಗಿತ್ತು. ತಕ್ಷಣವೇ ಅವರನ್ನು ನೆಲಮಂಗಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಲೀಲಾವತಿ ನಿಧನರಾಗಿದ್ದಾರೆ. ಅವರ ನಿಧನಕ್ಕೆ ಚಿತ್ರರಂಗಕ್ಕೆ ಚಿತ್ರರಂಗವೇ ಕಂಬನಿ ಮಿಡಿಯುತ್ತಿದೆ. ಆ ತಾಯಿ ಆತ್ಮಕ್ಕೆ ಶಾಂತಿ ದೊರಕಲೆಂದು ಪ್ರಾರ್ಥನೆ. ಓಂಶಾಂತಿ

Chitrodyama Updates

Chitrodyama Updates

Leave a Reply