
ತೆಲುಗು ಚಿತ್ರರಂಗದ ಸ್ಟೈಲೀಶ್ ಸ್ಟಾರ್ ಅಲ್ಲು ಅರ್ಜುನ್ ರವರಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು ಸ್ವತಃ ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ನಟ ಅಲ್ಲು ಅರ್ಜುನ್ ಮನೆಯಲ್ಲಿ ಐಸೋಲೇಶನ್ ಆಗಿದ್ದು ನಾನು ಚೆನ್ನಾಗಿದ್ದೇನೆ, ನನ್ನ ಬಗ್ಗೆ ಚಿಂತಿಸಬೇಡಿ ಮತ್ತು ಕಡ್ಡಾಯವಾಗಿ ಎಲ್ಲರೂ ಕೋವೀಡ್ ನಿಯಮಾವಳಿಗಳನ್ನು ತಪ್ಪದೇ ಪಾಲಿಸಿ ಎಂದು ತಮ್ಮ ಅಭಿಮಾನಿಗಳಿಗೆ ಸಂದೇಶವನ್ನು ನೀಡಿದ್ದಾರೆ.
ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ರವರು ಆದಷ್ಟು ಬೇಗನೆ ಕೋವಿಡ್ ಸೋಂಕಿನಿಂದ ಗುಣಮುಖರಾಗಿ ಪುನಃ ಚಿತ್ರರಂಗದಲ್ಲಿ ಸಕ್ರೀಯವಾಗಿ ತೊಡಗಿಕೊಳ್ಳಬೇಕೆಂಬುದು ಚಿತ್ರೋದ್ಯಮ.ಕಾಂ.ತಂಡದ ಹಾರೈಕೆಯಾಗಿದೆ.