ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವನ್ನುಮಾರ್ಚ್ 23 ರಿಂದ 30 ರವರೆಗೆ ನಡೆಸಲು ಉದ್ದೇಶಿಸಲಾಗಿದೆ. ಈ ಚಿತ್ರೋತ್ಸವ ಹಬ್ಬದ ಅಧಿಕೃತ ಲಾಂಛನವನ್ನು ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಯವರು ಫೆಬ್ರವರಿ 7 ನೇ ತಾರೀಕು ಮಂಗಳವಾರ ಬೆಂಗಳೂರಿನಲ್ಲಿ ಬಿಡುಗಡೆ ಮಾಡಿದರು. ಬೆಂಗಳೂರಿನ ಅಟಲ್ ಬಿಹಾರಿ ವಾಜಪೇಯಿ ಕ್ರೀಡಾಂಗಣದಲ್ಲಿ ಪುನೀತ್ ರಾಜ್ಕುಮಾರ್ ರಸ್ತೆ ಉದ್ಘಾಟನಾ ಸಮಾರಂಭಕ್ಕೆ ಆಗಮಿಸಿದ್ದ ಮುಖ್ಯಮಂತ್ರಿಗಳು ಲೋಗೋವನ್ನು ಅನಾವರಣಗೊಳಿಸಿದರು. ಈ ಸಂದರ್ಭದಲ್ಲಿ ಚಲನಚಿತ್ರ ವಾಣಿಜ್ಯ ಮಂಡಳಿಯ ಸದಸ್ಯರು ಹಾಗು ನಟ-ನಟಿಯರು ಭಾಗವಹಿಸಿದ್ದರು.
