ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಪುಷ್ಪ ಸಿನಿಮಾ ರಿಲೀಸ್ ಡೇಟ್ ಅನೌನ್ಸ್
ಕಳೆದ ವರ್ಷದಿಂದ ದೇಶಾದ್ಯಂತ ತೀವ್ರ ಸಂಚಲನವನ್ನು ಮೂಡಿಸಿರುವ ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ನಟಿಸಿದ ಬಹು ನಿರೀಕ್ಷೆಯ ಸಿನಿಮಾ ಪುಷ್ಪ ದಿ ರೈಸ್ ಡಿಸೆಂಬರ್ 17, 2021 ರಂದು ದೇಶಾದ್ಯಂತ ತೆರೆಗೆ ಬರಲಿದ್ದು ಎರಡು ಭಾಗಗಳಲ್ಲಿ ಬಿಡುಗಡೆಯಾಗುತ್ತಿದೆ.
ಪಂಚ ಭಾಷೆಗಳಲ್ಲಿ ಬರಲಿದ್ದು ಮಲೆಯಾಳಂ ಚಿತ್ರಗಳ ನಾಯಕ ನಟ ಫಹಾದ್ ಫಾಜೀಲ್, ರಶ್ಮಿಕಾ ಮಂದಣ್ಣ, ಜಗಪತಿ ಬಾಬು,ಸಮುತಿರಕನಿ ಮತ್ತು ಟಗರು ಖ್ಯಾತಿಯ ಡಾಲಿ ಧನಂಜಯ್ ಸೇರಿ ಅನೇಕ ಪ್ರಮುಖ ಕಲಾವಿದರು ಈ ಚಿತ್ರದಲ್ಲಿ ನಟಿಸಿದ್ದಾರೆ. ರಕ್ತ ಚಂದನ ಕಳ್ಳ ಸಾಗಾಣಿಕೆ ಕುರಿತ ಕಥೆಯನ್ನು ಹೊಂದಿರುವ ಈ ಚಿತ್ರವನ್ನು ಸೆನ್ಸೇಷನ್ ನಿರ್ದೇಶಕ ಎಂದೇ ಪ್ರಸಿದ್ಧಿಯನ್ನು ಪಡೆದಿರುವ ನಿರ್ದೇಶಕ ಸುಕುಮಾರ್ ನಿರ್ದೇಶಿಸಿರುವುದು ಚಿತ್ರ ಪ್ರೇಮಿಗಳಲ್ಲಿ ನಿರೀಕ್ಷೆಯನ್ನು ಇಮ್ಮಡಿಗೊಳಿಸಿದೆ.
ಸಂದೀಪ ಜೋಶಿ
ಸಂದೀಪ್ ಜೋಶಿ - ಇವರು ಕೊಪ್ಪಳ ಜಿಲ್ಲೆಯ ಗಂಗಾವತಿ ನಿವಾಸಿಯಾಗಿದ್ದು ಪ್ರಸ್ತುತ ಸ್ವ ಉದ್ಯೋಗದಲ್ಲಿ ತೊಡಗಿಕೊಂಡಿದ್ದಾರೆ. ಬಿ.ಎ.ಮತ್ತು ಡಿಪ್ಲೊಮಾ ಇನ್ ಹಾರ್ಟಿಕಲ್ಚರ್, ಸಿ.ಟಿ.ಟಿ.ಸಿ ತರಬೇತಿ, ರೇಕಿ ಚಿಕಿತ್ಸೆ ತರಬೇತಿಯನ್ನು ಪಡೆದಿದ್ದು 13 ವರ್ಷಗಳ ಕಾಲ ರಾಯಚೂರು, ಧಾರವಾಡ ಕೃಷಿ ವಿಶ್ವವಿದ್ಯಾಲಯ ಮತ್ತು ಬಾಗಲಕೋಟೆಯ ತೋಟಗಾರಿಕೆ ವಿಶ್ವವಿದ್ಯಾನಿಲಯದಲ್ಲಿ ಕ್ಷೇತ್ರ ಸಹಾಯಕ, ಗಣಕಯಂತ್ರ ನಿರ್ವಾಹಕ ಕೆಲಸವನ್ನು ನಿರ್ವಹಿಸಿದ್ದಾರೆ.
ಇವರು ಲೇಖಕರಷ್ಟೇ ಅಲ್ಲ.ನಟರು ಕೂಡ. ವೃತ್ತಿಯ ಜೊತೆಗೆ ರೇಕಿ ಚಿಕಿತ್ಸೆ ಮತ್ತು ಸಮಾಜ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.
ಚಿತ್ರರಂಗದ ಕೆಲವು ವಿಶಿಷ್ಟ ವಿಷಯಗಳ ಬಗ್ಗೆ ತಾನೇ ಅಲ್ಲಿ ಇಲ್ಲಿ ಸಂಶೋಧಿಸಿ, ಕೇಳಿ, ಓದಿ ತಿಳಿದ ವಿಷಯಗಳನ್ನೆಲ್ಲಾ ಒಂದೆಡೆ ಕೂಡಿಟ್ಟು, ಚಿತ್ರೋದ್ಯಮದ ಓದುಗರೊಂದಿಗೆ ಹಂಚಿಕೊಳ್ಳಲಿದ್ದಾರೆ.
ಸಂದೀಪ್ ಜೋಶಿ ಚಿತ್ರೋದ್ಯಮ.ಕಾಂ ಬರಹಗಾರರ ತಂಡದ ಬಹು ಮುಖ್ಯ ಸದಸ್ಯ.
ಸಂದೀಪ್ ಜೋಶಿಯವರ ಲೇಖನಗಳಿಗೆ ನಿಮ್ಮದೊಂದು ಮೆಚ್ಚುಗೆಯಿರಲಿ
ಕ್ರೇಜಿ ಸ್ಟಾರ್ ರವಿಚಂದ್ರನ್ ಮುಖ್ಯ ಪಾತ್ರದಲ್ಲಿ ನಟಿಸುತ್ತಿರುವ ಹೊಸ ಚಿತ್ರಕ್ಕೆ ‘ದಿ ಜಡ್ಜ್ಮೆಂಟ್’ ಎಂದು ಹೆಸರಿಡಲಾಗಿದೆ. ಅಮೃತಾ ಅಪಾರ್ಟ್ಮೆಂಟ್ ಎಂಬ ಸಿನಿಮಾ ಮೂಲಕ ಪ್ರಸಿದ್ಧಿಯಾಗಿದ್ದ ನಿರ್ದೇಶಕ ಗುರುರಾಜ…
ಕಳೆದ ವಾರದಿಂದ ಒಂದರ ಹಿಂದೆ ಮತ್ತೊಂದು ಹೊಸ ಪೋಸ್ಟರ್ ಗಳು ಬಿಡುಗಡೆಯಾಗ್ತಾ ಇವೆ.ಇನ್ನು 2 ತಿಂಗಳಲ್ಲಿ ಸುಮಾರು 10 ದೊಡ್ಡ ಕನ್ನಡ ಸಿನಿಮಾಗಳು ಚಿತ್ರಮಂದಿರಗಳಲ್ಲಿ ಅಬ್ಬರಿಸಲಿದೆ. ಶಿವಣ್ಣ…
ಕಿರುತೆರೆಯ ಎಂಟರ್ಟೈನ್ಮೆಂಟ್ನ ಕೇಂದ್ರ ಬಿಂದು ಆಗಿರುವ ಧಾರಾವಾಹಿಗಳ ಹೊಸ ಕಂತುಗಳ ಚಿತ್ರೀಕರಣ ನಡೆಯದ ಕಾರಣ, ಎಲ್ಲಾ ಖಾಸಗಿ ವಾಹಿನಿಗಳಲ್ಲೂ ಹಳೆಯ ಎಪಿಸೋಡಗಳ ಮರುಪ್ರಸಾರವಾಗುತ್ತಿದೆ. 30 ವರ್ಷಗಳ ಹಿಂದೆ…