ಹೆಸರಾಂತ ನಿರ್ದೇಶಕ ಮಿಲನ ಪ್ರಕಾಶ್, ಚಾಲೇಂಜಿಂಗ್ ಸ್ಟಾರ್ ದರ್ಶನ್ ಗಾಗಿ ಒಂದು ಸಿನಿಮಾ ಮಾಡಲಿದ್ದಾರೆ ಎನ್ನುವ ಸುದ್ದಿ ಹಲವು ತಿಂಗಳಿಂದ ಹರಿದಾಡುತ್ತಿತ್ತು ಅದು ಈಗ ನಿಜವಾಗಿದೆ ಇಂದು ಬೆಂಗಳೂರಿನ ದೊಡ್ಡ ಮಹಾ ಗಣಪತಿ ದೇವಸ್ಥಾನದಲ್ಲಿ ದರ್ಶನ್ ಅವರ ಹೊಸ ಸಿನಿಮಾದ (New Cinema) ಮಹೂರ್ತ ನಡೆದಿದೆ. ಈ ಸಿನಿಮಾಗೆ ತಾತ್ಕಾಲಿಕವಾಗಿ ‘ಡಿ-57 ‘ ಎಂದು ಹೆಸರಿಟ್ಟು ಮುಹೂರ್ತ ನೆರವೇರಿಸಿದ್ದಾರೆ
(Milan Prakash) ಈ ಸಿನಿಮಾವನ್ನು ನಿರ್ದೇಶನ ಮಾಡಲಿದ್ದು, ಅಜನೀಶ್ ಲೋಕನಾಥ್ ಅವರು ಸಂಗೀತಾ ಸಂಯೋಜಿಸಲಿದ್ದಾರೆ , ವೈಷ್ಣೋ ಬ್ಯಾನರ್ ಅಡಿಯಲ್ಲಿ ಈ ಸಿನಿಮಾ ನಿರ್ಮಾಣವಾಗಲಿದೆ. ಈ ನಡುವೆ ಮತ್ತೊಂದು ಸುದ್ದಿ ಗಾಂಧಿ ನಗರದಲ್ಲಿ ಜೋರಾಗಿಯೇ ಕೇಳಿ ಬರುತ್ತಿದೆ. ದರ್ಶನ್ ಮತ್ತು ಸುದೀಪ್ ಕಾಂಬಿನೇಷನ್ ನ ದಿಗ್ಗಜರು 2 ಸಿನಿಮಾ ಬಗ್ಗೆ ಚರ್ಚೆ ನಡೆಯುತ್ತಿದೆ. ಮತ್ತೆ ಇಬ್ಬರು ಜೊತೆಯಾಗಿ ನಟಿಸುತ್ತಾರಾ ಎಂಬ ಪ್ರಶ್ನೆ ಅಭಿಮಾನಿಗಳಲ್ಲಿ ಖುಷಿ ತಂದಿದೆ